ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕಾರಿಯಾಗಲು ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ - ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದೆ. ಇವತ್ತು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನಿಲ್ ಕುಮಾರ್ ಅವರ ಸಮ್ಮುಖದಲ್ಲಿ ರೂ.16,50,000 ಮೊತ್ತದ ಆಂಬುಲೆನ್ಸ್ ಅನ್ನು ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಲಾಯಿತು.ಕೊಡುಗೆ ನೀಡಿದ ಸಂಸ್ಥೆಗೆ ನೂತನ ಸಚಿವರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ , ನಗರಾಭಿವೃದ್ಧ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಭಟ್, ಮತ್ಸ್ಯೋದ್ಯಮಿಗಳಾದ ಹರಿಯಪ್ಪ ಕೋಟ್ಯಾನ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಮತ್ತು ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
09/08/2021 01:30 pm