ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ ಸ್ಥಿತಿ ಗತಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಬಗ್ಗೆ ಹಾಗೂ ಆಕ್ಸಿಜನ್ ಲಭ್ಯತೆಯ ಬಗ್ಗೆ ಮಾಹಿತಿ ಪಡೆದು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಶಾಸಕ ಕೆ. ರಘುಪತಿ ಭಟ್
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾll. ಕೆ ಸುಧಾಕರ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನಿಲ್ ಕುಮಾರ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್. ಭೋಜೆಗೌಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ತ್ರಿಲೋಕಚಂದ್ರ ಕೆ.ವಿ., ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
12/08/2021 07:03 pm