ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕರ್ಪ್ಯೂ ಕುರಿತ ಸುಳ್ಳು ವದಂತಿಗೆ ಕಿವಿಗೊಡಬೇಡಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಕೋವಿಡ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ 04.01.2022 ರಂದು ಹೊರಡಿಸಿರುವ ಸರ್ಕಾರದ ಆದೇಶ ಸಂ.ಕಂಇ 158.ಟಿ.ಎನ್.ಆರ್ 2020 ರಂತೆ ಹಾಗೂ ದಿನಾಂಕ:05.01.2022 ರಂದು ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶದನ್ವಯ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ದಿನಾಂಕ: 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00 ರವರೆಗೆ ಕಟ್ಟು ನಿಟ್ಟಾಗಿ ಜಾರಿಯಲ್ಲಿರುತ್ತದೆ.

ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾಧಿಕಾರಿಯವರು ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ರದ್ದುಪಡಿಸಿರುತ್ತಾರೆ ಎಂದು ದಿನಾಂಕ 10.09.2021 ರ ವಿಡಿಯೋದ ತುಣುಕನ್ನು ಹರಿಯಬಿಟ್ಟಿರುವುದು, ಜನರಲ್ಲಿ ಗೊಂದಲ ಸೃಷ್ಟಿ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ.

ಇದು ಒಂದು ಸುಳ್ಳು ವದಂತಿಯಾಗಿದ್ದು, ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ದಿನಾಂಕ: 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00 ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ಪಷ್ಟಪಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

11/01/2022 07:14 pm

Cinque Terre

26.59 K

Cinque Terre

1