ಉಡುಪಿ: ಕೋವಿಡ್-19ಗೆ ಸಂಬಂಧಿಸಿದಂತೆ ಸರಕಾರದಿಂದ ಹೊರಡಿಸಲಾಗಿರುವ ಆದೇಶಗಳನ್ನು ಜಿಲ್ಲೆಯಾದ್ಯಂತ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ (984543 2303), ಮಣಿಪಾಲ ಠಾಣಾ ವ್ಯಾಪ್ತಿಗೆ ನಗರಸಭೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಯಶವಂತ್ ಪ್ರಭು(9743412642), ಮಲ್ಪೆ ಠಾಣಾ ವ್ಯಾಪ್ತಿಗೆ ನಗರಸಭೆ ಕಂದಾಯ ಅಧಿಕಾರಿ ಧನಂಜಯ(87620 83841), ಉಡುಪಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್‌ರಾಜ್(8277932515), ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ್(984433 9919) ಹಾಗೂ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ (9731860832), ಕಾಪು ಪುರಸಭೆ ವ್ಯಾಪ್ತಿಗೆ ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ(9449491456), ಕಾಪು ತಾಲೂಕು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಗೆ ತಾಪಂ ಕಾರ್ಯನಿರ್ವಹಣಾಧಿಕಾರಿ ಸತೀಶ್( 702278 8764) ಹಾಗೂ ಬಂದರು ಮತ್ತು ಮೀನುಗಾರಿಕಾ ಉಪವಿಭಾಗದ ಸಹಾಯಕ ಇಂಜಿನಿಯರ್ ಜಯರಾಜ್(9901094519), ಬ್ರಹ್ಮಾವರ ಹೋಬಳಿ ವ್ಯಾಪ್ತಿ ಗ್ರಾಮಗಳಿಗೆ ತಾಪಂ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ್(94806 95375) ಹಾಗೂ ಲೋಕೋಪಯೋಗಿ ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಿರೀಶ್ ಕೆ.ಪಿ (8073524387), ಕೋಟ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ.ನಾಯಕ್(9901657075) ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ಗಣೇಶ್ ನಾಯಕ್(9686627488), ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ಪ.ಪಂ.ಮುಖ್ಯಾಧಿಕಾರಿ ಶಿವ ನಾಯ್ಕಾ(99458 71473), ಕಾರ್ಕಳ ಪುರಸಭೆ ವ್ಯಾಪ್ತಿಗೆ ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ (9886163309), ಕಾರ್ಕಳ ತಾಲೂಕು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಗೆ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ಕಾರ್ಯದರ್ಶಿ ಗೋಪಾಲ ಕಾಕನೂರು(9886925800), ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿಜಯ ಕುಮಾರ್(9480732746) ಹಾಗೂ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ತಾಪಂ ಕಾರ್ಯನಿರ್ವಹಣಾಧಿಕಾರಿ ಗುರುದತ್(87629 38626), ಹೆಬ್ರಿ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ.ಎಲ್.(9480076286) ಇವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Kshetra Samachara
12/01/2022 08:10 pm