ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಡುಪಿ ಕ್ಷೇತ್ರದಾದ್ಯಂತ 1500 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಮಾಡಲಾಗಿದೆ. ಈ ಗದ್ದೆಗಳಲ್ಲಿ ಪೈರಿನ ನಡುವೆ ಕಳೆ ಗಿಡಗಳು ಬೆಳೆದಿರುವುದರಿಂದ ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಸೇವಾ ಮನೋಭಾವನೆಯಿಂದ ಪಾಲ್ಗೊಂಡು ಕಳೆಗಳನ್ನು ತೆಗೆಯುವ ಕಾರ್ಯ ಮಾಡುತ್ತಿದ್ದಾರೆ.
ಇವತ್ತು ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಕೆಳ ನೇಜಾರು, ಮೂಡುತೋನ್ಸೆ, ಕಲ್ಯಾಣಪುರದಲ್ಲಿ ಕಳೆಗಳನ್ನು ತೆಗೆಯುವ ಕಾರ್ಯ ನಡೆಯುತ್ತಿದೆ.ಈ ಕಾರ್ಯದಲ್ಲಿ ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಡಾll ಸಂದೀಪ್ ಕುಮಾರ್, ಚಲನಚಿತ್ರ ನಟ, ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಅವರು ಗದ್ದೆಗಳಿದು ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಕಾರ್ಯದಲ್ಲಿ ಭಾಗವಹಿಸಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್,ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಖ್ಯಾತ್ ಶೆಟ್ಟಿ, ರಾಜ್ಯ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ ಹಾಗೂ ನಗರ ಮತ್ತು ಗ್ರಾಮಾಂತರ ಯುವ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯರು, ಕೃಷಿಕರು ಉಪಸ್ಥಿತರಿದ್ದರು.
Kshetra Samachara
30/08/2021 01:06 pm