ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳದಲ್ಲಿ 50 ನೇ ವರ್ಷದ ಸಾಮೂಹಿಕ ವಿವಾಹ : ನವ ಜೀವನಕ್ಕೆ ಕಾಲಿಟ್ಟ 183 ಜೋಡಿ..

ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಈ ಬಾರಿ ಒಟ್ಟು 183 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಇನ್ನು ನೂತನ ವಧು-ವರರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಆಶೀರ್ವದಿಸಿದರು. ವಿಶೇಷ ಅಂದ್ರೆ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಅತಿಥಿಯಾಗಿ ಅಗಮಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ವೈದಿಕರ ಮಂಗಳ ವೇದಘೋಷ, ವಾದ್ಯಘೋಷಗಳ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 183 ಜೋಡಿ ವಧು-ವರರು ಬುಧವಾರ ಸಂಜೆ 6.50ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನೂತನ ದಂಪತಿಗಳಾಗಿ ಗ್ರಹಸ್ಥಾಶ್ರಮಕ್ಕೆ ಕಾಲಿಟ್ಟರು.

ಸಿಂಗರಿಸಿದ ಆನೆಗಳು, ಕೊಂಬು, ಕಹಳೆ, ಬ್ಯಾಂಡ್ ವಾದ್ಯಗಳ ಮೂಲಕ ಕ್ಷೇತ್ರದ ಪರವಾಗಿ ಸಾಂಪ್ರದಾಯಿಕವಾಗಿ ಮೆರವಣಿಗೆಯಲ್ಲಿ ವಧು-ವರರನ್ನು ಸ್ವಾಗತಿಸಲಾಯಿತು.

6.50ರ ರ ಗೋಧೂಳಿ ಮುಹೂರ್ತದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದೊಂದಿಗೆ ವಧು-ವರರು ಪ್ರಮಾಣ ವಚನವನ್ನು ಸ್ವೀಕರಿಸಿ, ಸತಿಪತಿಗಳಾದರು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಧರ್ಮಸ್ಥಳದಲ್ಲಿಉಚಿತ ಸಾಮೂಹಿಕ ವಿವಾಹ ಪ್ರಾರಂಭಿಸಿದ್ದು, ಪ್ರತಿ ವರ್ಷ ಈ ಕಾರ್ಯಕ್ರಮ ನಡೆಯುತ್ತದೆ. ಸದ್ಯ 50ನೇ ವರ್ಷವನ್ನು ಪೂರೈಸಿದ್ದು, ಇದುವರೆಗೆ ಒಟ್ಟು 12,576 ಜೋಡಿ ದಾಂಪತ್ಯ ಜೀವನವನ್ನು ಆರಂಭಿಸಿದ್ದಾರೆ.

Edited By :
Kshetra Samachara

Kshetra Samachara

28/04/2022 01:16 pm

Cinque Terre

13.43 K

Cinque Terre

0

ಸಂಬಂಧಿತ ಸುದ್ದಿ