ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಬ್ರಮಣ್ಯ: ಖ್ಯಾತ ಬಾಲಿವುಡ್ ನಿರ್ದೇಶಕ ಮಧುರ್ ಭಂಡಾರ್ಕರ್ ಕುಕ್ಕೆ ದೇಗುಲಕ್ಕೆ ಭೇಟಿ

ಸುಬ್ರಮಣ್ಯ: ಬಾಲಿವುಡ್‌ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳಿಗೆ ನಿರ್ದೇಶನ ಹಾಗೂ ನಿರ್ಮಾಣ ಮಾಡುವುದರ ಮೂಲಕ ಪ್ರಸಿದ್ಧರಾಗಿರುವ ಮಧುರ್ ಭಂಡಾರ್ಕರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದು, ಇಲ್ಲಿನ ಫೋಟೋವನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಧುರ್ ಭಂಡಾರ್ಕರ್ ಅವರು ನಟರಾಗಿ, ನಿರ್ದೇಶಕ, ನಿರ್ಮಾಪಕ ಮತ್ತು ಬರಹಗಾರರಾಗಿ ಬಾಲಿವುಡ್ ನಲ್ಲಿ ಪ್ರಸಿದ್ದರಾಗಿದ್ದಾರೆ. ಇವರು ಪ್ರಧಾನವಾಗಿ ಪ್ರಿಯಾಂಕ ಚೋಪ್ರಾ ಅಭಿನಯದ ಫ್ಯಾಷನ್, ಟ್ರಾಫಿಕ್ ಸಿಗ್ನಲ್,ಹಾಗೂ ಹೀರೋಯಿನ್ ಹೀಗೆ ಸಾಕಷ್ಟು ಬಾಲಿವುಡ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ಕರ್ನಾಟಕದ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಮಧುರ್ ಭಂಡಾರ್ಕರ್ ಅವರು ವಿಶೇಷ ಪೂಜೆ ಸಲ್ಲಿಸಿದ್ದು, ನಂತರದಲ್ಲಿ ಕುಕ್ಕೆಯ ಚಿತ್ರವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

23/06/2022 10:58 pm

Cinque Terre

13.58 K

Cinque Terre

0

ಸಂಬಂಧಿತ ಸುದ್ದಿ