ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಲಿ ಕುಣಿತ ಸ್ಟೆಪ್ ವೈರಲ್ !

ಉಡುಪಿ: ಕೊರೋನಾ ಕಾರಣದಿಂದ ಉಡುಪಿಯಲ್ಲಿ ಈ ಬಾರಿ ಸರಳ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಈ ಬಾರಿ ಹುಲಿ ವೇಷಧಾರಿಗಳಿಗೆ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ದೈವಸ್ಥಾನಗಳಿಂದ ಹೊರಡುವ ಹುಲಿವೇಷ ತಂಡಗಳು ಸಾಂಪ್ರದಾಯಿಕ ಲೋಬಾನ ಹಾಕುವ ಆಚರಣೆಯನ್ನು ಮಾತ್ರ ಮಾಡಿವೆ.

ಬೈಲೂರು ನೀಲಕಂಠ ಮಹಾಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜ್ಯೂನಿಯರ್ ಫ್ರೆಂಡ್ಸ್ ನ ಲೋಬಾನ ಹಾಕುವ ಸಂಪ್ರದಾಯದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭಾಗವಹಿಸಿದ್ದಾರೆ. ದೈವಸ್ಥಾನದ ಹುಲಿವೇಷ ತಂಡದ ಯುವಕರ ಜೊತೆ ರಕ್ಷಿತ್ ಶೆಟ್ಟಿ ಜಬರ್ದಸ್ತ್ ಸ್ಟೆಪ್ ಹಾಕಿದ್ದಾರೆ. ಪಕ್ಕಾ ವೇಷಧಾರಿಗಳಂತೆ ಕುಣಿದಿದ್ದಾರೆ.

ರಕ್ಷಿತ್ ,ಪ್ರತಿ ವರ್ಷ ಅಷ್ಟಮಿ ಸಂದರ್ಭ ದೈವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಮತ್ತು ಪ್ರಾಂಗಣದಲ್ಲಿ ಹುಲಿ ಕುಣಿಯುವ ಸಂಪ್ರದಾಯ ನಡೆಸಿಕೊಂಡು ಬರುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

31/08/2021 01:15 pm

Cinque Terre

17.85 K

Cinque Terre

0

ಸಂಬಂಧಿತ ಸುದ್ದಿ