ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಿನಿಮಾ,ನಾಟಕ ಪ್ರದರ್ಶನಕ್ಕೆ ಪೂರ್ಣ ಪ್ರಮಾಣದಲ್ಲಿ ಅವಕಾಶ ಮಾಡಿಕೊಡಿ: ಹಿರಿಯ ಕಲಾವಿದರ ಒತ್ತಾಯ

ಮಂಗಳೂರು: ಲಾಕ್ ಡೌನ್ ಮುಗಿದು ರಾಜ್ಯದಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡಿಲ್ಲ. ಹಾಗೆಯೇ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ ಎಂದು ಕರಾವಳಿಯ ಹಿರಿಯ ಕಲಾವಿದರು ನೋವು ತೋಡಿಕೊಂಡಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹಿರಿಯ ಕಲಾವಿದರಾದ ದೇವದಾಸ್ ಕಾಪಿಕಾಡ್, ವಿಜಯ ಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ ಶೆಟ್ಟಿ, ಸಿನಿಮಾ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಹಾಗೂ ಮೋಹನ್ ಕೊಪ್ಪಲ, ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ.

ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಸಿಎಂಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕಲಾವಿದರ ಸ್ಥಿತಿಗತಿಯನ್ನು ಅರ್ಥ ಮಾಡಿಸಬೇಕು. ಸಿನಿಮಾ, ನಾಟಕ ಪ್ರದರ್ಶನಗಳಿಗೆ ಪೂರ್ಣ ಪ್ರಮಾಣದಲ್ಲಿ ಅವಕಾಶ ನೀಡಬೇಕೆಂದು ಆಗ್ರಹಿಸಿದರು. ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಪ್ರಕರಣದಿಂದ ಕಲಾವಿದರು ಸಂಕಷ್ಟಕ್ಕೆ ಈಡಾಗಿದ್ದಾರೆ. ನಾಟಕ, ಸಿನಿಮಾಗಳು ಇಲ್ಲದೆ ಕಲಾವಿದರು ನಿರ್ಗತಿಕರಾಗಿದ್ದಾರೆ. ಅದನ್ನೇ ನಂಬಿಕೊಂಡು ನೂರಾರು ಕುಟುಂಬಗಳಿವೆ. ಈ ಬಗ್ಗೆ ಜಿಲ್ಲಾಡಳಿತ, ರಾಜ್ಯ ಸರಕಾರ ಸ್ಪಂದಿಸಬೇಕಾಗಿದೆ ಎಂದು ಆಗ್ರಹಿಸಿದರು.

Edited By :
Kshetra Samachara

Kshetra Samachara

16/09/2021 07:55 pm

Cinque Terre

27.56 K

Cinque Terre

2