ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಪುನೀತ್ ಗೆ ವಿಶೇಷ ಗೌರವ ಕೊಡಲು ರಾಜ್ಯ ಸರ್ಕಾರ ಉತ್ಸುಕ: ದೀಪಾವಳಿ ಬಳಿಕ ತೀರ್ಮಾನ: ಸಚಿವ ಸುನಿಲ್ ಕುಮಾರ್

ಉಡುಪಿ: ಪುನೀತ್ ರಾಜಕುಮಾರ್ ನಿಧನ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ.ಸರಕಾರ ಎಲ್ಲ ಎಚ್ಚರಿಕೆಗಳನ್ನು ತೆಗೆದುಕೊಂಡು ಶ್ರದ್ಧಾಂಜಲಿ ಅರ್ಪಿಸಿದೆ.ಪುನೀತ್ ರಾಜಕುಮಾರ್ ಗೆ ರಾಜ್ಯೋತ್ಸವ ಕೊಡಬೇಕು ಎಂಬ ಮಾತು ಎಲ್ಲಾ ಕಡೆಗಳಿಂದ ಕೇಳಿಬಂತು.

ನಿಯಮಾವಳಿ ಮತ್ತು ಕೋರ್ಟ್ ಆದೇಶದ ಪ್ರಕಾರ ಮರಣೋತ್ತರ ಪ್ರಶಸ್ತಿಗೆ ಅವಕಾಶವಿಲ್ಲ. ಅವಕಾಶ ಇಲ್ಲದ ಕಾರಣ ಈ ಬೇಡಿಕೆ ಪರಿಗಣಿಸಲು ಸಾಧ್ಯವಾಗಿಲ್ಲ ಎಂದು ಇಂಧನ- ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಚಿವರು,ಮುಂದಿನ ದಿನಗಳಲ್ಲಿ ಪುನೀತ್ ರಾಜಕುಮಾರ್ ಸೇವೆಯನ್ನ ಪರಿಗಣಿಸುತ್ತೇವೆ.

ಯಾವ ರೀತಿಯ ಗೌರವ ಕೊಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತದೆ. ಈಗಲೇ ಯಾವುದೇ ತರಾತುರಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ.

ದೀಪಾವಳಿ ನಂತರ ಸಭೆ ನಡೆಸಿ ಗೌರವ ಸಲ್ಲಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ. ಪುನೀತ್ ಗೆ ವಿಶೇಷ ಗೌರವ ಕೊಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದ್ದಾರೆ.

Edited By : Shivu K
Kshetra Samachara

Kshetra Samachara

01/11/2021 11:37 am

Cinque Terre

10.83 K

Cinque Terre

1

ಸಂಬಂಧಿತ ಸುದ್ದಿ