ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಪುರುಷೋತ್ತಮನ ಪ್ರಸಂಗ ಕನ್ನಡ ಸಿನಿಮಾಕ್ಕೆ ಚಾಲನೆ

ಬಜಪೆ : ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪುರುಷೋತ್ತಮನ‌ ಪ್ರಸಂಗ ಸಿನಿಮಾದ ಮುಹೂರ್ತವು ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು.

ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ ಸಿನಿಮಾಕ್ಕೆ ಮುಹೂರ್ತ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬಿ.ಆರ್. ಶೆಟ್ಟಿ, ನಿರ್ಮಾಪಕರಾದ ವಿ. ರವಿ ಕುಮಾರ್, ಶ್ಯಾಂಸುದ್ದೀನ್, ಎಚ್.ಕೆ.ಪ್ರಕಾಶ್ ಗೌಡ, ಅಜಯ್ ಪೃಥ್ವಿ, ರಿಷಿಕಾ ನಾಯ್ಕ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಗಿರೀಶ್ ಎಂ.ಶೆಟ್ಟಿ ಕಟೀಲು, ವಾಲ್ಟರ್ ನಂದಳಿಕೆ, ಜಗನ್ನಾಥ ಶೆಟ್ಟಿ ಬಾಳ, ಸಾಯಿಕೃಷ್ಣ, ಭೋಜರಾಜ ವಾಮಂಜೂರು, ಮೊದಲಾದವರು ಉಪಸ್ಥಿತರಿದ್ದರು. ನಿರ್ದೇಶಕ ದೇವದಾಸ ಕಾಪಿಕಾಡ್ ಸ್ವಾಗತಿಸಿದರು. ಆದಿತ್ಯರಾಜ್ ಕಾರ್ಯಕ್ರಮ ನಿರ್ವಹಿಸಿದರು.

ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರು

ಪುರುಷೋತ್ತಮನ ಪ್ರಸಂಗ ಕನ್ನಡ ಸಿನಿಮಾಕ್ಕೆ ಮಂಗಳೂರು ಸುತ್ತ ಮುತ್ತ ಚಿತ್ರೀಕರಣ ನಡೆಯಲಿದೆ. ಸುಮಾರು 26 ದಿನಗಳ ಕಾಲ ಮಂಗಳೂರಿನಲ್ಲಿ ಚಿತ್ರೀಕರಣ ನಡೆದ ಬಳಿಕ 10 ದಿನಗಳ ಕಾಲ ದುಬಾಯಿಯಲ್ಲಿ ಚಿತ್ರೀಕರಣ ನಡೆಯಲಿದೆ ಎಂದರು.

ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಸಿನಿಮಾದಲ್ಲಿ ಪ್ರತಿಯೊಂದು ಪಾತ್ರವೂ ಇಲ್ಲಿ ಕತೆಗೆ ಪೂರಕವಾಗಿ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ.

ಈ ಸಿನಿಮಾದ ಮೂಲಕ ಅಜಯ್ ಪೃಥ್ವಿ ಎಂಬ ನವ ನಟನನ್ನು ಹಾಗೂ ರಿಷಿಕಾ ನಾಯ್ಕ್ ಮತ್ತು ದೀಪಿಕಾ ಎಂಬವರು ಕನ್ನಡಕ್ಕೆ ಪರಿಚಯವಾಗುತ್ತಿದ್ದಾರೆ ಎಂದರು..

ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಇಲ್ಲಿ ಅವಕಾಶ ಇದೆ ಎಂದು ಕಾಪಿಕಾಡ್ ತಿಳಿಸಿದರು.

Edited By : Shivu K
Kshetra Samachara

Kshetra Samachara

26/11/2021 03:49 pm

Cinque Terre

7.15 K

Cinque Terre

0