ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ರೌಡಿಶೀಟರ್ ಆತ್ಮಹತ್ಯೆ

ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಗುತ್ತಕಾಡು ಚೆನ್ನಯ್ಯ ಬೆಟ್ಟು ಎಂಬಲ್ಲಿ ರೌಡಿಶೀಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಂತೋಷ್ ಪೂಜಾರಿ (39) ಎಂದು ಗುರುತಿಸಲಾಗಿದೆ

ಮೃತ ಸಂತೋಷ್ ಪೂಜಾರಿ ಕೂಲಿ ಕೆಲಸ ಮಾಡುತ್ತಿದ್ದು ಗುರುವಾರ ರಾತ್ರಿ ಮನೆಯ ಕೋಣೆಯ ಫ್ಯಾನಿಗೆ ಬೈರಾಸ್ ನಿಂದ ಮೂಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮನೆಯಲ್ಲಿ ತಾಯಿ ಮತ್ತು ಪತ್ನಿ ನೆಲೆಸಿದ್ದು ಶುಕ್ರವಾರ ಬೆಳಿಗ್ಗೆ ಸಂತೋಷ್ ತನ್ನ ಕೋಣೆಯಿಂದ ಹೊರಗೆ ಬರದಿದ್ದುದನ್ನು ಕಂಡು ಪತ್ನಿ ಸಂಶಯದಿಂದ ನೋಡಿದಾಗ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೃತ ಸಂತೋಷ್ ಯಾನೆ ಅಲಿಯಾಸ್ ಸಂತೋಷ್ ಪೂಜಾರಿ ಕಳೆದ ಹಲವು ವರ್ಷಗಳ ಹಿಂದೆ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ಈತನ ವಿರುದ್ಧ ಮುಲ್ಕಿ ಠಾಣೆಯಲ್ಲಿ ರೌಡಿಶೀಟರ್ ಸಹಿತ ಆರು ಪ್ರಕರಣಗಳು ದಾಖಲಾಗಿತ್ತು ಎಂದು ಮುಲ್ಕಿ ಪೊಲೀಸರು ತಿಳಿಸಿದ್ದಾರೆ.

ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Edited By :
Kshetra Samachara

Kshetra Samachara

03/12/2021 12:21 pm

Cinque Terre

4.8 K

Cinque Terre

0