ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ನಟ ಯಶ್ ಭೇಟಿ

ಬೆಳ್ತಂಗಡಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಖ್ಯಾತಿಯ ಯಶ್ ಇಂದು ಭೇಟಿ ನೀಡಿದರು. ಶೀಘ್ರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್-2 ಚಿತ್ರತಂಡದ ಜತೆಯಲ್ಲಿ ಯಶ್ ಶ್ರೀಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಯಶ್, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಜೊತೆಗೆ ಮಾತುಕತೆ ನಡೆಸಿದರು. ಇನ್ನು, ಸುಬ್ರಹ್ಮಣ್ಯದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಚಿತ್ರತಂಡವನ್ನು ಸ್ವಾಗತಿಸಿದರು. ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್, ಎಇಒ ಪುಷ್ಪಲತಾ, ಶಿಷ್ಟಾಚಾರ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

10/04/2022 03:11 pm

Cinque Terre

48.26 K

Cinque Terre

0

ಸಂಬಂಧಿತ ಸುದ್ದಿ