ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ನಟಿ ಪೂಜಾ ಹೆಗ್ಡೆ ಕಾಪು ಮಾರಿಗುಡಿಗೆ ಭೇಟಿ

ಕಾಪು: ಬಾಲಿವುಡ್ ಮತ್ತು ಸೌತ್ ಇಂಡಿಯಾ ಸಿನಿಮಾಗಳಲ್ಲಿ ಬಹು ಬೇಡಿಕೆ ಹೊಂದಿರುವ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಾರಿಗುಡಿಗೆ ಭೇಟಿ ನೀಡಿದರು.

ಮಂಗಳವಾರದ ಶುಭ ದಿನದಂದು ದೇವಿಯ ಸನ್ನಿಧಾನದಲ್ಲಿ ನಡೆಯುವ ಸಾಂಪ್ರದಾಯಿಕ ದರ್ಶನ ಸೇವೆಯಲ್ಲಿ ಭಾಗವಹಿಸಿರು. ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಸೇವೆಯಲ್ಲಿ ಪಾತ್ರಿಗಳಿಂದ ಆಶೀರ್ವಾದ ಪಡೆದರು. ಈ ಹಿಂದೆಯೂ ಮಾರಿಗುಡಿಗೆ ಬಂದಿದ್ದ ಪೂಜಾ ಹೆಗ್ಡೆ ಕ್ಷೇತ್ರದ ಬಗ್ಗೆ ತಮಗಿರುವ ಅಗಾಧ ಭಕ್ತಿ ಹಾಗೂ ಪ್ರೀತಿಯನ್ನು ಈ ವೇಳೆ ವ್ಯಕ್ತಪಡಿಸಿದ್ದರು.

ನಟಿ ಕುಟುಂಬ ಸದಸ್ಯರೊಂದಿಗೆ ದೇವಾಲಯದ ಆವರಣದಲ್ಲಿ ಕೆಲ ಕಾಲ ಕಳೆದರು. ಬಾಲಿವುಡ್ ಮಾತ್ರವಲ್ಲವೇ ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿರುವ ಪೂಜಾ ಹೆಗ್ಡೆ ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನವರು ಎಂಬುದು ಗಮನಾರ್ಹ ಸಂಗತಿ.

Edited By : Shivu K
PublicNext

PublicNext

03/05/2022 09:09 pm

Cinque Terre

56.79 K

Cinque Terre

1

ಸಂಬಂಧಿತ ಸುದ್ದಿ