ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳದಲ್ಲಿ ತುಳು ಚಿತ್ರ ನಟನ ಬರ್ಬರ ಹತ್ಯೆ

ಬಂಟ್ವಾಳ: ತುಳು ಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ನಡೆದಿದೆ.

ಸುರೇಂದ್ರ ಬಂಟ್ವಾಳ್ ಅವರು ಸವರ್ಣದೀರ್ಘ ಸಂಧಿ ಕನ್ನಡ ಚಿತ್ರ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ನಟಿಸಿದ್ದರು. ಆದರೆ ಹಣಕಾಸು ವಿಚಾರಕ್ಕೆ ಜೊತೆಗಿದ್ದವರೇ ಅವರನ್ನು ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ಹಿಂದೆ ನಟ ಸುರೇಂದ್ರ ಅವರು ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಬಂಧನಕ್ಕೊಳಗಾಗಿ ಜಾಮೀನಿನ ‌ಮೇಲೆ ಹೊರಬಂದಿದ್ದರು. ಅಷ್ಟೇ ಅಲ್ಲದೆ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. 2018ರ ಜೂನ್‌ನಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು.

Edited By : Vijay Kumar
Kshetra Samachara

Kshetra Samachara

21/10/2020 02:57 pm

Cinque Terre

58.65 K

Cinque Terre

4