ಮಂಗಳೂರು: ಹಾಡಹಗಲೇ ದುಷ್ಕರ್ಮಿಗಳ ಗುಂಪೊಂದು ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳದ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ನಡೆದಿದೆ.
ಕಲ್ಲಡ್ಕ ನಿವಾಸಿ ಚೆನ್ನೆ ಫಾರೂಕ್ ಹಲ್ಲೆಗೆ ಒಳಗಾದ ಯುವಕ. ರೌಡಿಶೀಟರ್ ಆಗಿರುವ ಚೆನ್ನೆ ಫಾರೂಕ್ ಮೇಲೆ ಕಾರಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗಂಭೀರ ಗಾಯಗೊಂಡ ರೌಡಿಶೀಟರ್‌ನನ್ನು ಪೊಲೀಸರು ಸಮೀಪದ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಾವನ್ನಪ್ಪಿದ್ದಾನೆ. ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
23/10/2020 06:10 pm