ಬೆಳ್ತಂಗಡಿ- ಯುವತಿಯರು ಹಾಗೂ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ಯಾಕ್ಸಿ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಬೆಳ್ತಂಗಡಿ ಸಮೀಪದ ಚಾರ್ಮಾಡಿ ಗ್ರಾಮದ ಹಳ್ಳ ಸೇತುವೆ ಎಂಬಲ್ಲಿ ಈ ಘಟನೆ ನಡೆದಿದೆ.
ಕಾರು ಹಾಗೂ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಬ್ಬಿಣದ ರಾಡ್, ಹಾಗೂ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ನೆಲಕ್ಕೆ ಕೆಡವಿ ತುಳಿದಿದ್ದಾರೆ ಹಾಗೂ ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ಹಲ್ಲೆಗೊಳಗಾದ ಮೊಹಮದ್ ದಿಸಾನ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸುಧೀರ್, ದಿನೇಶ್, ಪವನ್ ರಾವ್, ಕಿರಣ್ ಸಾಲಿಯಾನ್, ಅಖಿಲೇಶ್ ರಾವ್, ಜಗದೀಶ್ ಲೋಕೇಶ್, ಪ್ರಮೋದ್ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
Kshetra Samachara
28/10/2020 02:38 pm