ಬಂಟ್ವಾಳ: ಸ್ಟುಡಿಯೋಗೆ ನುಗ್ಗಿ ಫೋಟೊಗ್ರಾಫರ್ ಮೇಲೆ ತಲವಾರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ.
ಅಪರಿಚಿತ ವ್ಯಕ್ತಿಗಳು ಸ್ಟುಡಿಯೋಗೆ ನುಗ್ಗಿ ಮಾಲೀಕ ದಿನೇಶ್ ಎಂಬವರ ಮೇಲೆ ತಲವಾರು ಬೀಸಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.
Kshetra Samachara
28/10/2020 08:49 pm