ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಫಳ್ನೀರ್ ನಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಅಪರಿಚಿತರ ತಂಡ, ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ. ಮಂಗಳೂರಿನ ಫಳ್ನೀರ್ ಬಳಿ ಇರುವ ಎಂಎಫ್ ಸಿ ಹೊಟೇಲ್ ಮತ್ತು ಫ್ರೆಶ್ ಮಾರ್ಟ್ ಬಳಿ ದಾಳಿ ನಡೆಸಲಾಗಿದೆ.

ಈ ಅಂಗಡಿಗೆ ನಾಲ್ವರ ತಂಡ ಸಮೋಸಾ ಕೇಳಲು ಬಂದು ಗಲಾಟೆ ನಡೆಸಿದ್ದು, ಇದು ವಿಕೋಪಕ್ಕೆ ತಿರುಗಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಜೊತೆಗೆ ಹೊಟೇಲ್ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆಸಲಾಗಿದೆ.

ಹೋಟೆಲ್‌ನ ಗಾಜು, ಪೀಠೋಪಕರಣ ಧ್ವಂಸಗೈದು ಪರಾರಿಗೆ ಈ ತಂಡ ಯತ್ನಿಸಿದಾಗ ಸ್ಥಳೀಯರು ಅವರನ್ನು ಹಿಡಿಯಲು ಯತ್ನಿಸಿದ್ದಾರೆ. ಈ ಸಂದರ್ಭ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದರಿಂದ ಓರ್ವ ಸಿಬ್ಬಂದಿಗೆ ಗಾಯವಾಗಿದೆ. ಇಬ್ಬರನ್ನು ಸ್ಥಳೀಯರು ಹಿಡಿದಿದ್ದು, ಇನ್ನಿಬ್ಬರು ಆಟೋ ರಿಕ್ಷಾ ಹತ್ತಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಜನಜಂಗುಳಿ ಸೇರಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

30/10/2020 08:20 pm

Cinque Terre

48.76 K

Cinque Terre

4

ಸಂಬಂಧಿತ ಸುದ್ದಿ