ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಕ್ರಮ‌ ಗಾಂಜಾ ಸಾಗಾಟ - ಇಬ್ಬರ ಬಂಧನ ,740 ಗ್ರಾಂ ಗಾಂಜಾ ಸಹಿತ ಸೊತ್ತುಗಳ ವಶ

ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು ಭಂಡಾರಿ (19) ಬಂಧಿತರು. ಆರೋಪಿಗಳಿಂದ 53,300 ರೂ. ಮೌಲ್ಯದ 740 ಗ್ರಾಂ ತೂಕದ ಗಾಂಜಾ, 25 ಸಾವಿರ ರೂಪಾಯಿ ಮೌಲ್ಯದ ಸ್ಕೂಟರ್, 2170 ರೂ ನಗದು, 2 ಮೊಬೈಲ್, ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 98,770 ರೂ ಎಂದು ಅಂದಾಜಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್ ಮತ್ತು ಪ್ರೊಬೆಶನರಿ ಡಿ.ವೈ.ಎಸ್.ಪಿ. ಗೀತಾ ಪಾಟೀಲ್‌ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸೆನ್ ಪೊಲೀಸ್ ಠಾಣಾ ಸಿಬ್ಬಂದಿ ಪ್ರವೀಣ್ ಕುಮಾ‌ರ್, ಪ್ರವೀಣ್, ರಾಜೇಶ್, ವೆಂಕಟೇಶ್, ನಿಲೇಶ್, ರಾಘವೇಂದ್ರ, ಪ್ರಶಾಂತ್ ಮತ್ತು ಚರಣ್‌ರಾಜ್ ಅವರಿದ್ದ ತಂಡ ಈ ಕಾರ್ಯಾಚರಣೆ ನಡೆಸಿದೆ.

Edited By : Vijay Kumar
Kshetra Samachara

Kshetra Samachara

04/11/2024 09:13 am

Cinque Terre

14.82 K

Cinque Terre

0

ಸಂಬಂಧಿತ ಸುದ್ದಿ