ಉಡುಪಿ: ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.
ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಮನೆಯ ರೂಮ್ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನವೆಂಬರ್ 17ರಂದು ಕೊನೆಯುಸಿರೆಳೆದಿದ್ದಾರೆ. ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
PublicNext
20/11/2024 10:32 pm