ಮುಲ್ಕಿ: ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ಬೈಕಿಗೆ ಬೈಕ್ ಡಿಕ್ಕಿ ಹೊಡೆದು ಎಸೆಯಲ್ಪಟ್ಟ ಸವಾರ ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತರನ್ನು ಮೂಡಬಿದ್ರೆ ನಿವಾಸಿ ಎಂದು ಗುರುತಿಸಲಾಗಿದೆ. ಹಳೆಯಂಗಡಿ ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ಬಸ್ ನ್ನು ಓವರ್ ಟೇಕ್ ಮಾಡಿ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ಸಂದರ್ಭ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್, ಬೈಕ್ ಸವಾರನ ಮೇಲೆಯೇ ಹರಿದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ತಲೆ ಚೂರು- ಚೂರಾಗಿದ್ದು ರಸ್ತೆಯಲ್ಲಿ ರಕ್ತದೋಕುಳಿ ಹರಿದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೈಕುಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಪಘಾತದ ಸಂದರ್ಭ ರಸ್ತೆ ತಡೆ ಉಂಟಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
28/01/2021 07:16 pm