ಬಂಟ್ವಾಳ: ಚಲಿಸುತ್ತಿದ್ದ ಬಸ್‌ನಿಂದ ಮಹಿಳೆಯೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೇಪು ಗ್ರಾಮದ ಕರವೀರ ಅಂಗನವಾಡಿ ನಡೆದಿದೆ.
ಬಂಟ್ವಾಳ ತಾಲೂಕು ಕೇಪು ಗ್ರಾಮದ ಮೈರದವರಾದ ಪುಷ್ಪಾವತಿ ಎಂಬವರು ಗಂಭೀರ ಗಾಯಗೊಂಡವರು. ಪುಷ್ಪಾವತಿ ಅವರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಕರವೀರ ಎಂಬಲ್ಲಿಯ ಅಂಗನವಾಡಿ ಬಳಿಯ ತಿರುವಿನಲ್ಲಿ ಪುಷ್ಪಾವತಿ ಅವರು ಬಸ್‌ನಿಂದ ಹೊರಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿರುವ ಅವರನ್ನು ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Kshetra Samachara
30/01/2021 01:53 pm