ಬಂಟ್ವಾಳ: ಕಾರೊಂದು ಪ್ರಪಾತಕ್ಕೆ ಉರುಳಿ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬುಡೋಳಿ ಸಮೀಪ ಇರುವ ಅಪಾಯಕಾರಿ ಹೊಂಡಕ್ಕೆ ಉರುಳಿ ಬಿದ್ದಿದೆ. ಬುಡೋಳಿ ಯೂತ್ ಫೇಡರೇಶನ್ ಸದಸ್ಯರು ಮತ್ತು ಸೈಲೆಂಟ್ ಫ್ರೆಂಡ್ಸ್ ಬುಡೋಳಿ ಸದಸ್ಯರು ಕಾರ್ಯಾಚರಣೆ ನಡೆಸಿ ಕಾರಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ.
Kshetra Samachara
20/02/2021 04:22 pm