ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ಮುಕ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಮೇಲೇರಿ ಪಲ್ಟಿಯಾಗಿದ್ದು ಚಾಲಕ ಪವಾಡಸದೃಶ ಪಾರಾಗಿದ್ದಾರೆ.
ಮಂಗಳೂರಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಮುಕ್ಕ ಸಮೀಪಿಸುತ್ತಿದ್ದಂತೆ ಏಕಾಏಕಿ ಡಿವೈಡರ್ ಮೇಲೇರಿದ್ದು ಎರಡು ಬಾರಿ ಪಲ್ಟಿಯಾಗಿ ನಿಂತಿದೆ.
ಈ ಸಂದರ್ಭ ಕಾರಿನಲ್ಲಿ ಏರ್ ಬ್ಯಾಗ್ ಇದ್ದ ಕಾರಣ ಚಾಲಕ ಉಡುಪಿ ನಿವಾಸಿ ಉಪನ್ಯಾಸಕ ಶೇಖರ್ ಎಂಬವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಪವಾಡಸದೃಶ ಪಾರಾಗಿದ್ದಾರೆ. ಭಾರಿ ಮಳೆಯ ಬರುತ್ತಿದ್ದ ಕಾರಣ ಅಪಘಾತ ನಡೆದಿದೆ ಎನ್ನಲಾಗಿದ್ದು ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
29/08/2021 01:25 pm