ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೊರಂಗ್ರಪಾಡಿ; ಮಹಿಳೆ ಆತ್ಮಹತ್ಯೆ

ಉಡುಪಿ: ಮಹಿಳೆಯೊರ್ವಳು ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಕೊರಂಗ್ರಪಾಡಿ ಬೊಬ್ಬರ್ಯಗುಜ್ಜಿಯಲ್ಲಿ ರವಿವಾರ ನಡೆದಿದೆ. ಮೃತ ಮಹಿಳೆಯನ್ನು ಮಂಜುಳ (49 ವ) ಗಂಡ ಪಾಂಡುರಂಗ ರಾವ್ ಪಠಾಣ್ಕರ್ ಎಂದು ಗುರುತಿಸಲಾಗಿದೆ. ಇವರು ಕೆಲವು ಸಮಯದಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಅಶೋಕ್ ಕುಮಾರ್, ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ವೈದ್ಯಕೀಯ ಪರೀಕ್ಷೆಗೆ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು, ಮಂಜುನಾಥ ಪೂಜಾರಿ ಇಲಾಖೆಗೆ ಸಹಕರಿಸಿದರು.

Edited By : Nagesh Gaonkar
Kshetra Samachara

Kshetra Samachara

29/08/2021 07:56 pm

Cinque Terre

28.7 K

Cinque Terre

2

ಸಂಬಂಧಿತ ಸುದ್ದಿ