ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪ ಪಾವಂಜೆಯಲ್ಲಿ ಕಾರು ಪಲ್ಟಿಯಾಗಿ ಚಾಲಕ ಪವಾಡಸದೃಶವಾಗಿ ಪಾರಾಗಿದ್ದಾರೆ.
ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿಯ ಪಾವಂಜೆ ಜಂಕ್ಷನ್ ತಲುಪುತ್ತಿದ್ದಂತೆಯೇ ಕಾರಿನ ಟಯರ್ ಸ್ಫೋಟಗೊಂಡಿದೆ.
ಈ ಸಂದರ್ಭ ಕಾರು, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿ ನಿಲ್ಲಿಸಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತ ಸಂದರ್ಭ ಕಾರಿನಲ್ಲಿದ್ದ ಚಾಲಕ ಮಂಗಳೂರು ಬೆಂಗ್ರೆ ನಿವಾಸಿ ಮುಸ್ತಫಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದಾಗಿ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿದ್ದು, ಸುರತ್ಕಲ್ ಟ್ರಾಫಿಕ್ ಪೊಲೀಸರು ಹಾಗೂ ಹೆದ್ದಾರಿ ಇಲಾಖೆಯ ಸಿಬ್ಬಂದಿ ಕಾರನ್ನು ತೆರವುಗೊಳಿಸಿದರು.
Kshetra Samachara
13/11/2021 09:02 pm