ಮಣಿಪಾಲ:ಇಲ್ಲಿನ ಮಣ್ಣಪಳ್ಳ ಕೆರೆಯಲ್ಲಿ ಯುವಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಮಂಚಿಕೇರಿಯ ನಿವಾಸಿ ಮಹಮ್ಮದ್ ಇಸ್ಮಾಯಿಲ್ (28) ಎಂದು ಗುರುತಿಸಲಾಗಿದೆ. ವಾಯುವಿಹಾರಿಗಳು ನೀರಿನಲ್ಲಿ ತೇಲುತ್ತಿರುವ ಶವವನ್ನು ಗಮನಿಸಿ ಮಾಹಿತಿ ನೀಡಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸ್ಥಳದಲ್ಲಿದ್ದು ಪರಿಶೀಲಿಸಿದ್ದಾರೆ. ತನಿಖೆ ಮುಂದುವರಿದಿದೆ. ವೈದ್ಯಕೀಯ ಪರೀಕ್ಷೆಗೆ ಶವವನ್ನು ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೆನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದರು.
Kshetra Samachara
23/02/2022 08:32 pm