ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಬೈಕ್-ಜೀಪು ನಡುವೆ ಅಪಘಾತ- ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಸುಳ್ಯ: ಇಲ್ಲಿನ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ.

ಪೆರಾಜೆಯ ಆರ್.ಡಿ. ವೆಂಕಪ್ಪ ಅವರ ಪುತ್ರ ದರ್ಶನ್ ಮತ್ತು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದರು. ಕುಂಬಳಚೇರಿ ಬಳಿಯ ಗಡಿ ಗುಡ್ಡೆ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಜೀಪ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಜೀಪಿಗೆ ಗುದ್ದಿದೆ ಎನ್ನಲಾಗಿದೆ.

ತಲೆಗೆ ಗಾಯವಾಗಿ ವಿಶ್ವದೀಪ್ ಸ್ಥಳದಲ್ಲೇ ಮೃತಪಟ್ಟರೆ, ದರ್ಶನ್‌ಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅವರಿಬ್ಬರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ದರ್ಶನ್‌ನನ್ನು ಮಂಗಳೂರಿಗೆ ಕಳುಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Edited By : Vijay Kumar
Kshetra Samachara

Kshetra Samachara

23/03/2022 06:21 pm

Cinque Terre

14.95 K

Cinque Terre

1

ಸಂಬಂಧಿತ ಸುದ್ದಿ