ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಡಿವೈಡರ್ ಹಾರಿ ಮುಂದಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ- ನಾಲ್ವರಿಗೆ ಗಾಯ

ಪುತ್ತೂರು: ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಇಂದು (ಭಾನುವಾರ) ಕೆಮ್ಮಾಯಿಯಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಮರನಾಥ್ ಗೌಡ ಅವರ ಐ20 ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಎರಡೂ ಕಾರುಗಳಿಗೆ ಹಾನಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿವೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸ್ ಎಸ್. ಐ. ರಾಮನಾಯ್ಕ್ ಮತ್ತು ಸಿಬ್ಬಂದಿ ಭೇಟ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Vijay Kumar
Kshetra Samachara

Kshetra Samachara

27/03/2022 07:50 pm

Cinque Terre

13.88 K

Cinque Terre

0

ಸಂಬಂಧಿತ ಸುದ್ದಿ