ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದುರಂತ ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆಯ ಕುಟುಂಬ!

ಮಂಗಳೂರು: ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದ ಮಹಿಳೆಯ ಮಿದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಲಿವರ್ ಅನ್ನು ಬೆಂಗಳೂರಿನ ಆ್ಯಸ್ಟರ್ ಸಿಎಂಐ ಆಸ್ಪತ್ರೆಗೆ ಹಾಗೂ ಕಿಡ್ನಿಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ಆಸ್ಪತ್ರೆಯ ಜೀವ ಸಾರ್ಥಕತೆಯ ವಿಭಾಗವು ಅಂಗಾಂಗಗಳನ್ನು ರವಾನಿಸುವ ವ್ಯವಸ್ಥೆ ಮಾಡಿದೆ. ಅಂಗಾಂಗಳು ಝೀರೋ ಟ್ರಾಫಿಕ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿನ ಆಸ್ಪತ್ರೆಗೆ ರವಾನೆಯಾಯಿತು.

ಎ.9ರಂದು ಶ್ರವಣ್ ಕುಮಾರ್ ಎಂಬಾತ ಬಳ್ಳಾಲ್ ಬಾಗ್ ನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದು ಡಿವೈಡರ್ ದಾಟಿ ಪ್ರೀತಿ ಮನೋಜ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸಹಿತ ನಾಲ್ಕು ವಾಹನಗಳಿಗೆ ಢಿಕ್ಕಿ ಹೊಡೆದಿದ್ದ‌. ಪರಿಣಾಮ ಪ್ರೀತಿ ಮನೋಜ್ ಹಾಗೂ ಮತ್ತೋರ್ವ ಬಾಲಕ ಗಾಯಗೊಂಡಿದ್ದರು‌. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪ್ರೀತಿ ಮನೋಜ್ ಜೀವನ್ಮರಣ ಸ್ಥಿತಿಯಲ್ಲಿ 13 ದಿನಗಳ ಹೋರಾಟ ನಡೆಸುತ್ತಿದ್ದರು. ನಿನ್ನೆ ಅವರ ಮಿದುಳು ನಿಷ್ಕ್ರಿಯಗೊಂಡಿರುವ ಬಗ್ಗೆ ವೈದ್ಯರು ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಪ್ರೀತಿ

Edited By :
PublicNext

PublicNext

23/04/2022 01:35 pm

Cinque Terre

58.07 K

Cinque Terre

7

ಸಂಬಂಧಿತ ಸುದ್ದಿ