ಪುತ್ತೂರು: ಟಿಪ್ಪರ್ ಚಾಲಕನ ಅಜಾಗರೂಕತೆ ಚಾಲನೆಗೆ ಸ್ಕೂಟರ್ ಸವಾರನೊಬ್ಬ ಬಲಿಯಾಗಿದ್ದಾನೆ. ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದಿದೆ. ಸ್ಕೂಟರ್ ಸವಾರನ ತಲೆ ಮೇಲೆ ಟಿಪ್ಪರ್ ಹರಿದ ಹಿನ್ನಲೆಯಲ್ಲಿ ತಲೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡ ಸಹಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವನ್ನಪ್ಪಿದ ಸ್ಕೂಟರ್ ಸವಾರನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳಕ್ಕೆ ಪುತ್ತೂರು ಡಿವೈಎಸ್‌ಪಿ ಗಾನ ಕುಮಾರ್ ಸೇರಿದಂತೆ ಪೋಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಗಳು ಹಲವರ ಬಲಿ ಪಡೆದಿದ್ದು, ಈ ಲಾರಿಗಳನ್ನು ನಿಯಂತ್ರಿಸಬೇಕಾದ ಸಾರಿಗೆ ಇಲಾಖೆ ಮತ್ತು ಪೋಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kshetra Samachara
04/05/2022 02:22 pm