ಬೈಂದೂರು: ಬೈಂದೂರು ತಾಲೂಕು ವ್ಯಾಪ್ತಿಯ ಶಿರೂರಿನಲ್ಲಿ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಟೋಲ್ ಗೇಟ್ ಕಂಬಕ್ಕೆ ಡಿಕ್ಕಿಯಾದ ಪ್ರಕರಣದಲ್ಲಿ ನಾಲ್ವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೃತರನ್ನು ಗಜಾನನ, ಗೀತಾ, ಲೋಕೇಶ್, ಮಂಜುನಾಥ ಎಂದು ಗುರುತಿಸಲಾಗಿದೆ. ಮೃತರಲ್ಲಿ ಅಂಬುಲೆನ್ಸ್‌ನಲ್ಲಿದ್ದ ರೋಗಿ, ರೋಗಿ ಪತ್ನಿ ಮತ್ತು ಸಂಬಂಧಿ ಸೇರಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಲ್ಲಿ ಈ ದುರಂತ ಇಂದು ಸಂಭವಿಸಿತ್ತು. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಬಡಿದು ಪಲ್ಟಿಯಾಗಿತ್ತು. ಗಂಭೀರ ಗಾಯಗೊಂಡ ನಾಲ್ವರನ್ನು ಕುಂದಾಪುರದ ಆಸ್ಪತ್ರೆಗೆ ಸೇರಿಸಲಾಗಿತ್ತು.
Kshetra Samachara
20/07/2022 07:46 pm