ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಬೋಟ್‌ನಿಂದ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.
ನಾಪತ್ತೆಯಾದವರನ್ನು ತಮಿಳುನಾಡು ಮೂಲದ ಗಣೇಶನ್ (51) ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ರಾಯಲ್ ಫಿಶರ್ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಮೀನುಗಾರರೆಲ್ಲ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ದಕ್ಕೆಯಲ್ಲಿ ತಯಾರಿ ನಡೆಸುತ್ತಿರುವಾಗ, ಗಣೇಶನ್ ಬೋಟಿನ ಹಿಂಬದಿಯಲ್ಲಿ ಮೂತ್ರ ವಿಸರ್ಜನೆ ಮಾಡಲು ಹೋಗಿದ್ದರು. ಆಗ ಆಯತಪ್ಪಿ ಆಕಸ್ಮಿಕವಾಗಿ ಬೋಟಿನಿಂದ ಬಿದ್ದು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಇವರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.
Kshetra Samachara
11/08/2022 03:51 pm