ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ಮೂಲದ ದಂತವೈದ್ಯೆ ಪುಣೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಮಂಗಳೂರು ಮೂಲದ ದಂತ ವೈದ್ಯೆ ಜಿಶಾ ಜಾನ್ ಎಂಬವರು ಪುಣೆಯ ಪಿಂಪ್ರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೂಲತಃ ಮಂಗಳೂರಿನ ವೆಲೆನ್ಸಿಯಾ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜಾನ್(27) ಮೃತಪಟ್ಟವರು.

ಜಿಶಾ ಜಾನ್ ಸ್ಕೂಟರ್ ನಲ್ಲಿ ಪುಣೆಯ ಪಿಂಪ್ರಿಯಲ್ಲಿ ಮನೆ ಕಡೆಗೆ ಹೋಗುತ್ತಿದ್ದರು‌. ಈ ವೇಳೆ ಅವರು ಸಂಚರಿಸುತ್ತಿದ್ದ ಸ್ಕೂಟರ್ ಗೆ ಟ್ರಕ್ ಢಿಕ್ಕಿ ಹೊಡೆದಿದೆ‌.‌ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ‌. ಜಿಶಾ ಜಾನ್ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದಾರೆ.

Edited By : Nagaraj Tulugeri
PublicNext

PublicNext

14/09/2022 03:51 pm

Cinque Terre

25.94 K

Cinque Terre

2

ಸಂಬಂಧಿತ ಸುದ್ದಿ