ಬಂಟ್ವಾಳ: ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫರಂಗಿಪೇಟೆ ಕೊಟ್ಟಿಂಜ ನಿವಾಸಿ ಛಾಯಾಚಿತ್ರ ಗ್ರಾಹಕ, ಬಿಜೆಪಿ ಕಾರ್ಯಕರ್ತ ದಿನೇಶ್ ಶೆಟ್ಟಿ ಕೊಟ್ಟಿಂಜ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆ ನೆರವಿಗಾಗಿ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ನೀಡಿದ್ದಾರೆ.
ಅ.28 ರಂದು ಬುಧವಾರ ರಾತ್ರಿ 7.30 ಸುಮಾರಿಗೆ ಪುದು ಗ್ರಾಮದ ಕೊಟ್ಟಿಂಜ ನಿವಾಸಿ ದಿನೇಶ್ ಶೆಟ್ಟಿ ಅವರ ಫರಂಗಿಪೇಟೆಯಲ್ಲಿರುವ ಸ್ಟುಡಿಯೋ ಗೆ ನಾಲ್ಕು ಮಂದಿ ನುಗ್ಗಿ ತಲೆ, ಹೊಟ್ಟೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದರು. ಗಾಯಾಳು ದಿನೇಶ್ ಮಂಗಳೂರು ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಜತೆ ಪುದು ಜಿ.ಪಂ. ಸದಸ್ಯ ರವೀಂದ್ರ ಕಂಬಳಿ, ಗಣೇಶ್ ರೈ ಮಾಣಿ ಮತ್ತಿತರರು ಇದ್ದರು.
Kshetra Samachara
06/11/2020 09:58 am