ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಸಿದ್ದಾರೆ. ಉಗ್ರರ ಪರ ಗೋಡೆಯಲ್ಲಿ ಬರೆದ ಶಂಕಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಕಾರ್ಯಚರಣೆ ನಡೆಸಿದ ಮಂಗಳೂರು ಕದ್ರಿ ಠಾಣೆ ಪೊಲೀಸರು ಮಹಮ್ಮದ್ ನಝೀರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ಬಂಧಿತನಾದ ಈತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದವನು ಎಂದು ತಿಳಿದು ಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧಾರದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Kshetra Samachara
03/12/2020 12:06 pm