ಮಂಗಳೂರು: ನಗರದಲ್ಲಿ ಕಂಡುಬಂದ ಉಗ್ರ ಪರ ಪ್ರಚೋದನಕಾರಿ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಸಾದತ್ ಎಂದು ತಿಳಿದು ಬಂದಿದೆ. ಈತ
ಈ ಹಿಂದೆ ಬಂಧನಕ್ಕೆ ಒಳಗಾಗಿರುವ ಮುಹಮ್ಮದ್ ಶಾರೀಕ್‌ನ ಸಂಬಂಧಿ.
ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಈಗಾಗಲೇ ಇಬ್ಬರನ್ನು ಬಂಧಿಸಿದ್ದರು. ಸಾದಾತ್ ನ ಬಂಧನದೊಂದಿಗೆ ಆರೋಪಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
Kshetra Samachara
09/12/2020 07:48 am