ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗೋ ಕಳ್ಳರಿಗೆ ಅಭಯ; ಕಾರ್ಕಳ ನಗರ ಬಜರಂಗದಳ ಮಾಜಿ ಸಂಚಾಲಕ ಅನಿಲ್ ಪ್ರಭು ಅಂದರ್

ಕಾರ್ಕಳ: ಗೋ ಕಳ್ಳರಿಗೆ ನೆರವಾಗುತ್ತಿದ್ದ ಕಾರ್ಕಳ ನಗರದ ಬಜರಂಗದಳ ಮಾಜಿ ಸಂಚಾಲಕ ಅನಿಲ್ ಪ್ರಭು ಪೊಲೀಸರ ಅತಿಥಿಯಾಗಿದ್ದಾನೆ.

ದನಗಳನ್ನು ಕಳವುಗೈದು ಅದರ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ಈತ ಸಹಾಯ ಮಾಡುತ್ತಿದ್ದ. ಪೊಲೀಸರಿಂದ ಯಾವುದೇ ರೀತಿ ತೊಂದರೆಯಾಗದಂತೆ ನಾನಿದ್ದೇನೆ ಎಂದು ವಾಗ್ದಾನ ನೀಡಿ ಅವರಿಂದ ಪಾಲು ಪಡೆಯುತ್ತಿದ್ದಾನೆಂದು ತನಿಖೆಯ ವೇಳೆ ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಅನಿಲ್ ಪ್ರಭುನನ್ನು ಬಂಧಿಸಿದ್ದಾರೆ.

ಕಾರ್ಕಳ ನಗರದ ಬಂಗ್ಲೆಗುಡ್ಡೆ ಜಂಕ್ಷನ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಮೊಹಮ್ಮದ್ ಯಾಸೀನ್ ಎಂಬ ಆರೋಪಿಯು ವಾಹನ ಅಲ್ಲೇ ಬಿಟ್ಟು ಪರಾರಿಯಾಗಿದ್ದ. ವಾಹನ ಪರಿಶೀಲನೆ ನಡೆಸಿದ ಸಂದರ್ಭ ಪ್ಲಾಸ್ಟಿಕ್ ಚೀಲದ ಒಳಗೆ ದನದ ಮಾಂಸ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮೊಹಮ್ಮದ್ ಯಾಸೀನ್ ನನ್ನು ಬಂಧಿಸಿ ವಿಚಾರಿಸಿದಾಗ ಅನಿಲ್ ಪ್ರಭು ಸಹಾಯ ಮಾಡುತ್ತಿದ್ದ ವಿಷಯ ಬಹಿರಂಗಗೊಂಡಿದೆ.

Edited By : Nagaraj Tulugeri
Kshetra Samachara

Kshetra Samachara

14/12/2020 10:16 am

Cinque Terre

25.95 K

Cinque Terre

18

ಸಂಬಂಧಿತ ಸುದ್ದಿ