ಬೆಳ್ತಂಗಡಿ: ಏಕಾಏಕಿ ತಾಲೂಕಿನ ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ನುಗ್ಗಿದ ಒಂಭತ್ತು ಜನ ದರೋಡೆಕೋರರ ತಂಡ ಯಜಮಾನ ಮತ್ತು ಅವರ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಪತಿ , ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಈ ಸಂದರ್ಭದಲ್ಲಿ ಇದ್ದುದರಿಂದ ಇವರನ್ನೆಲ್ಲ ಮಾರಕಾಸ್ತ್ರ ತೋರಿಸಿ ಬೆದರಿಸಿ ಕೂಡಿ ಹಾಕಿ ಕಿಡಿಗೇಡಿಗಳು ದರೋಡೆ ನಡೆಸಿದ್ದಾರೆ.
ಸದ್ಯ ಧರ್ಮಸ್ಥಳ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
21/12/2020 07:32 am