ಬೆಳ್ತಂಗಡಿ: ಮನೆಯೊಂದಕ್ಕೆ ದರೋಡೆಕೋರರು ನುಗ್ಗಿ ನಗ- ನಗದು ದೋಚಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ.
ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ 9 ಮಂದಿ ದರೋಡೆಕೋರರ ತಂಡ
ಸೋಮವಾರ ಮುಂಜಾವ 2.30 ರ ವೇಳೆಗೆ ನುಗ್ಗಿ ಮನೆಯ ಯಜಮಾನ ಮತ್ತವರ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಹಿತ ನಗದು ಲೂಟಿ ಮಾಡಿ ಪರಾರಿಯಾಗಿದೆ.
ಈ ದರೋಡೆಕೋರರ ತಂಡ ದಂಪತಿಯನ್ನು ಸ್ಥಳದಲ್ಲೇ ಕೂಡಿ ಹಾಕಿ ಹಲ್ಲೆ ನಡೆಸಿದ ಸಂದರ್ಭ ತುಕ್ರಪ್ಪ ಶೆಟ್ಟಿಯವರ ಪತ್ನಿಗೆ
ಚೂರಿಯಿಂದ ಹೊಟ್ಟೆಗೆ ಎರಡು ಬಾರಿ ಇರಿದಿದ್ದು, ತೀವ್ರ ಗಾಯವಾಗಿವೆ. ಕೂಡಲೇ ಅವರನ್ನು ಮಂಗಳೂರಿನ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಮನೆಯಲ್ಲಿ ಪತಿ-ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಈ ಸಂದರ್ಭ ಇದ್ದುದರಿಂದ ಇವರನ್ನೆಲ್ಲ ಮಾರಕಾಸ್ತ್ರ ತೋರಿಸಿ ಬೆದರಿಸಿ, ಕೂಡಿ ಹಾಕಿ ದರೋಡೆ ನಡೆಸಲಾಗಿದೆ.
ದರೋಡೆಕೋರರು ತೆರಳುತ್ತಲೇ ಮನೆಯವರು, ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಕೂಡಲೇ ಪೊಲೀಸ್ ಅಧಿಕಾರಿಗಳು ಧಾವಿಸಿದ್ದಾರೆ.
ಸ್ಥಳೀಯವಾಗಿ ವಿಶ್ವ ಹಿಂದೂ ಪರಿಷತ್ ನ ಕೊಕ್ಕಡ ವಲಯ ಅಧ್ಯಕ್ಷರಾಗಿದ್ದ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ದರೋಡೆ ಕೋರರು ನುಗ್ಗಿದ ವಿಷಯ ತಿಳಿಯುತ್ತಲೇ ನೂರಾರು ಮಂದಿ ಆಗಮಿಸಿದ್ದಾರೆ.
ದರೋಡೆಕೋರರು 9 ಮಂದಿ ಯಿದ್ದು, ಎಲ್ಲ ರಸ್ತೆಗಳನ್ನು ನಾಕಾಬಂದಿ ಹಾಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
21/12/2020 10:49 am