ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ- ತಪ್ಪಿದ ಭಾರೀ ಅನಾಹುತ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್‌ದ ಸುರೇಶ್ ಖಾರ್ವಿ ಎಂಬವರಿಗೆ ಸೇರಿದ ಮತ್ಸ್ಯಾಂಜನೇಯ ಎಂಬ ಬೋಟ್‌ನಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ತಾಂತ್ರಿಕ ಕಾರಣದಿಂದಾಗಿ ಭಟ್ಕಳದಿಂದ 19 ನಾಟಿಕಲ್ ಮೈಲುದೂರದ ಅರಬ್ಬಿ ಸಮುದ್ರದಲ್ಲಿ ಬೋಟ್‌ ಮುಳುಗಡೆಯಾಗಿದೆ.

ಬೋಟ್‌ನಲ್ಲಿದ್ದ ಆರು ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂ. ಮೌಲ್ಯದ ಹಾನಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕರಾವಳಿ ಕಾವಲುಪಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
Kshetra Samachara

Kshetra Samachara

21/12/2020 02:11 pm

Cinque Terre

29.65 K

Cinque Terre

2

ಸಂಬಂಧಿತ ಸುದ್ದಿ