ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರೆ: ಬಾರ್ ಮ್ಯಾನೇಜರ್ ಲಾಡ್ಜಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಪಡುಬಿದ್ರೆ: ಇಲ್ಲಿನ ಬಾರೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾರ್ಕಳ ಸಮೀಪದ ನಿಟ್ಟೆ ನಿವಾಸಿ ಸುರೇಶ್ ಶೆಟ್ಟಿ ಎಂಬವರೆ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು,ಇವರು ಪಡುಬಿದ್ರಿ ಡೌನ್ ಟೌನ್ ಬಾರಿನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದು ಇಂದು ಪಡುಬಿದ್ರಿ ಸಮೀಪದ ಅಡ್ವೆಯ ಲಾಡ್ಜಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ದಾವಿಸಿ ತನಿಖೆ ಮುಂದುವರಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

23/12/2020 07:23 pm

Cinque Terre

18.23 K

Cinque Terre

0