ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋವೊಂದು ವೈರಲ್ ಆಗಿದೆ. ಇದೀಗ ಈ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ಕಾಲೇಜು ಯೂನಿಫಾರಂನಲ್ಲೇ ಕಿಸ್ಸಿಂಗ್‌ನಲ್ಲಿ ತೊಡಗಿರುವ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಇದೇ ಕಾರಣದಿಂದ ಈ ವಿಡಿಯೋದಲ್ಲಿರುವುದು ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳ ತಂಡದ ಮಧ್ಯೆಯಿದ್ದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಲಾಕ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದೀಗ ಈ ವಿಡಿಯೋ ಮಾಡಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದ ಕ್ರಮಕ್ಕೆ ಮುಂದಾಗಿದ್ದಾರೆ.
ಈ ವಿಡಿಯೋದಲ್ಲಿ ಮೂವರು ಯುವಕರು ಹಾಗೂ ಮೂವರು ವಿದ್ಯಾರ್ಥಿನಿಯರಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ, ಐಡಿ ಕಾರ್ಡ್ ಸಹಿತ ಇದ್ದರೆ, ಉಳಿದ ಮೂವರು ಯುವಕರು ಯೂನಿಫಾರಂನಲ್ಲಿಲ್ಲ. ಸದ್ಯ ಪೊಲೀಸರು ವಿದ್ಯಾರ್ಥಿನಿಯರು ಹಾಗೂ ಆ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿದ್ದು, ಶೀಘ್ರವೇ ಅವರೆಲ್ಲರನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
PublicNext
21/07/2022 09:40 am