ಶಂಕಿತ ನಕ್ಸಲರಾದ ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ಪೊಲೀಸರು ಕುಂದಾಪುರದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣವನ್ನು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಇಬ್ಬರು ಆರೋಪಿಗಳಿಗೆ ಸಂಬಂಧಿಸಿದ ಶಂಕರನಾರಾಯಣ ಹಾಗೂ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಏಳು ಪ್ರಕರಣಗಳನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾಯಿಸಿ ನ್ಯಾಯಾಧೀಶ ಧನೇಶ್ ಮುಗಳಿ ಆದೇಶ ನೀಡಿದರು. ಈ ಇಬ್ಬರು ಶಂಕಿತ ನಕ್ಸಲರನ್ನು ಕರ್ನಾಟಕ ಪೊಲೀಸರು ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆದಿದ್ದು, ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2003, 2004, 2005ರಲ್ಲಿನ ಮೂರು, 2006ರ ಒಟ್ಟು 6 ಪ್ರಕರಣ ಹಾಗೂ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ 2005ರ ಒಂದು ಪ್ರಕರಣದಲ್ಲಿ ಮಹಜರು ಮೊದಲಾದ ತನಿಖಾ ಪ್ರಕ್ರಿಯೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಅದರಂತೆ ಈ ಏಳು ಪ್ರಕರಣಗಳು ಸೆಶನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದೆ. ಅಲ್ಲದೆ ಇಬ್ಬರನ್ನೂ ಕೇರಳದ ತ್ರಿಶೂರ್ ಜೈಲಿಗೆ ರವಾನಿಸಲು ಆದೇಶ ನೀಡಲಾಗಿದೆ.
PublicNext
18/08/2022 02:24 pm