ಉಡುಪಿ: ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ನಿವಾಸಿ ಪ್ರಸ್ತುತ ಹೆಬ್ರಿ ಹಾಗೂ ಮುದ್ರಾಡಿ ಗ್ರಾಮ ಪಂಚಾಯತ್ ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸದಾಶಿವ ಸೇರ್ವೆಗಾರ್ ಅರಣ್ಯ ಇಲಾಖೆಗೆ ಸೇರಿರುವ ಜಾಗದಲ್ಲಿ ಅಕ್ರಮ ಕಟ್ಟಡ(ಮನೆ)ವನ್ನು ನಿರ್ಮಿಸುತ್ತಿದ್ದು, ಈ ಬಗ್ಗೆ ಪೆರ್ಡೂರು ಪಂಚಾಯತಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ಲಿಖಿತ ದೂರು ಸಲ್ಲಿಸಲಾಗಿದೆ ಎಂದು ಸಮಾಜಸೇವಕ ಅನ್ಸಾರ್ ಅಹಮದ್ ಹೇಳಿದ್ದಾರೆ.
ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಪೆರ್ಡೂರು ಗ್ರಾಮದ ಸರ್ವೆ ನಂಬರ್ ನಂಬರ್ 73/3 ರಲ್ಲಿ ಕಟ್ಟಡ ನಿರ್ಮಿಸಲು ಪರವಾನಿಗೆಯನ್ನು ಪಡೆದುಕೊಂಡಿರುತ್ತಾರೆ. ಆದರೆ ಸರ್ಕಾರಕ್ಕೆ ಮೋಸ ಮಾಡುವ ಉದ್ದೇಶದಿಂದ ಕಟ್ಟಡವನ್ನು ಅರಣ್ಯ ಇಲಾಖೆಗೆ ಸೇರಿದ ಸರ್ವೇ ನಂಬ್ರ 296 ರಲ್ಲಿ ಮನೆ ನಿರ್ಮಿಸುತ್ತಿದ್ದಾರೆ. ಸದ್ರಿ ಸರ್ಕಾರಿ ಜಾಗದಲ್ಲಿ ನಿರ್ಮಿಸುತ್ತಿರುವ ಅಕ್ರಮ ಕಟ್ಟಡಕ್ಕೆ ಅವರದೇ ಹೆಸರಿನ ದಾಖಲೆಗಳನ್ನು ಸಲ್ಲಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನೂ ಪಡೆದು ಬಿಲ್ ಪಾವತಿ ಮಾಡುತ್ತಾ ಬಂದಿರುತ್ತಾರೆ ಎಂದು ಹೇಳಿದ್ದಾರೆ.
ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡುತ್ತಿರುವುದರಿಂದ ಹೆಬ್ರಿ ವಲಯ ಅರಣ್ಯಾಧಿಕಾರಿಯವರು ಸದಾಶಿವ ಸೇರ್ವೆಗಾರ್ ರವರ ಮೇಲೆ ಈ ಕೂಡಲೇ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು. ಅಲ್ಲದೆ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ಕೆಡವಬೇಕು.ಈ ಬಗ್ಗೆ ಅರಣ್ಯ ಸಚಿವರಿಗೂ ದೂರು ಸಲ್ಲಿಸಲಾಗುವುದು. ಪಿಡಿಓ ಸದಾಶಿವ ಸೇರ್ವೆಗಾರ್ ರನ್ನು ಕೂಡಲೇ ಸೇವೆಯಿಂದ ಅಮಾನತು ಗಳಿಸಬೇಕಾಗಿ ಉಡುಪಿ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಲ್ಲಿ ಮನವಿ ಮಾಡುತ್ತೇವೆ ಎಂದು ಅನ್ಸಾರ್ ಅಹಮದ್ ಹೇಳಿದ್ದಾರೆ.ಸಾಮಾಜಿಕ ಕಾರ್ಯಕರ್ತ ಪ್ರಮೋದ್ ಉಚ್ಚಿಲ ಮತ್ತಿತರರು ಪತ್ರಿಕಾಗೋಷ್ಢಿಯಲ್ಲಿ ಉಪಸ್ಥಿತರಿದ್ದರು.
Kshetra Samachara
06/08/2021 02:35 pm