ಕುಂದಾಪುರ: ದೇಶದ ಕಾನೂನಿಗೆ ಸವಾಲೊಡ್ಡುವ ಯಾರನ್ನೇ ಆದರೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ದೇಶ ವಿರೋಧಿ ಹಾಗೂ ಗೋಹತ್ಯೆಯಂತಹ ದುಷ್ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೋಟೇಶ್ವರದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಮುಖರ ಸಮಾವೇಶವನ್ನು ಉದ್ಘಾಟಿಸಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.ಗೃಹ ಸಚಿವರು ಮತ್ತು ಈಶ್ವರಪ್ಪನವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ.ಗೋ ಕಳ್ಳತನ ಮಾಡುವವರು ಮತ್ತು ಗೋರಕ್ಷರ ಮೇಲೆ ದಾಳಿ ಮಾಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ.ಗೋ ರಕ್ಷಣೆಗೆ ನಮ್ಮ ಸರಕಾರ ಬದ್ಧ ಎಂದು ಹೇಳಿದ್ದಾರೆ.
Kshetra Samachara
03/12/2021 11:44 am