ಕಾರ್ಕಳ: ಸರಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮನೆಮನೆಗೆ ಸಂಗ್ರಹಿಸಿ ಅದನ್ನು ಅಧಿಕ ಹಣಕ್ಕೆ ಮಾರಲು ಯತ್ನಿಸುತ್ತಿದ್ದ ಓರ್ವನನ್ನು ಬಂಧಿಸಲಾಗಿದೆ. ಆರೋಪಿ ಮೊಹಮ್ಮದ್ ಅಬ್ದುಲ್ ರಹಿಮಾನ್ ಬಂಧಿತ. ಈತನಿಂದ 20 ಕ್ವಿಂಟಾಲ್ ಅಕ್ಕಿ ಮತ್ತು ಸಾಗಾಟಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನೀರೆ ಹಾಗೂ ಕಣಜಾರು ಗ್ರಾಮಗಳ ಬಿಪಿಎಲ್ ಕುಟುಂಬದವರಿಗೆ ತಿಂಗಳಿಗೆ 50 ಕೆಜಿ ಅಕ್ಕಿ ಸಿಗುತ್ತಿದ್ದು, ಕೆಲವರು ಅದನ್ನು ಈ ವ್ಯಕ್ತಿಗೆ ನೀಡಿ ಕೆಜಿಗೆ 10 ರೂ.ಗಳಂತೆ ಹಣ ಪಡೆಯುತ್ತಿದ್ದರು. ಆತ ಈ ಅಕ್ಕಿಯನ್ನು ಮಿಲ್ನಲ್ಲಿ ಪಾಲಿಷ್ ಮಾಡಿಸಿ ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ ಅಧಿಕ ಬೆಲೆಗೆ ಮಾರುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ. ಫುಡ್ ಇನ್ಸ್ಪೆಕ್ಟರ್ ಸುಮತಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
03/06/2022 03:00 pm