ಬ್ರಹ್ಮಾವರ: ಆರೂರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದ ಮೊಕ್ತೇಸರ, ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ. ಹಾವಂಜೆಯ ದೊಂಪದಕುಮೇರಿ ನಿವಾಸಿ, ಡಾ:ಎಂ. ರಾಘವೇಂದ್ರ ರಾವ್ (76) ಹಾವಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪತ್ನಿ ಒಂದು ತಿಂಗಳ ಹಿಂದೆ ಮೃತರಾಗಿದ್ದು, ಆ ದಿನದಿಂದ ಒಬ್ಬಂಟಿಯಾಗಿ ವಾಸ ಮಾಡಿಕೊಂಡಿದ್ದರು. ಅವರಿಗೆ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.
ಇನ್ನು ಹೆಂಡತಿಯನ್ನು ಕಳೆದುಕೊಂಡಿರುವ ಇವರಿಗೆ ಎರಡು ಹೆಣ್ಣು ಮಕ್ಕಳು ಅವರು ಮಂಗಳೂರಿನಲ್ಲಿ ವಾಸಮಾಡಿಕೊಂಡಿದ್ದು ವಾರಕ್ಕೊಮ್ಮೆ ಬಂದು ಹೋಗುತ್ತಿದ್ದರು ಎನ್ನಲಾಗಿದೆ. ಒಂಟಿ ಜೀವನದಿಂದ ಬೇಸತ್ತ ಇವರು ಇಂದು ಸಂಜೆ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
26/09/2021 10:57 pm