ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪತಿಯ ಮರಣದ ದಿನವೇ ಪತ್ನಿ ಹಾಗೂ ಮಗುವನ್ನು ತಿರಸ್ಕರಿಸಿದ ಕುಟುಂಬ: ಸಖಿ ಸೆಂಟರ್‌ಗೆ ದಾಖಲು!

ಉಡುಪಿ: ಉಡುಪಿಯಲ್ಲಿ ಹಲವು ವರ್ಷಗಳಿಂದ ಮೆಕ್ಯಾನಿಕ್ ಆಗಿ ಜೀವನ ನಿರ್ವಹಿಸುತ್ತಿದ್ದ ಬಾದಾಮಿ ಮೂಲದ ಅಯ್ಯಪ್ಪ (28) ಎಂಬವರು ಗುರುವಾರ ಹಠಾತ್ ಹೃದಯಾಘಾತದಿಂದ ಮೃತ ಪಟ್ಟಿದ್ದು, ಸಾಂತ್ವನ ಹೇಳಬೇಕಾದ ಬಾಂಧವರು ಮೃತನ ಪತ್ನಿ ಹಾಗೂ ಮಗುವನ್ನು ತಿರಸ್ಕರಿಸಿದ ಅಮಾನವೀಯ ಘಟನೆ ನಡೆದಿದೆ.ಈ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳಕ್ಕೆ ಧಾವಿಸಿ ಮೃತನ ಪತ್ನಿ ಹಾಗೂ ಆಕೆಯ 20 ದಿನಗಳ ಮಗುವನ್ನು ಉಡುಪಿಯ ಸಖಿ ಸೆಂಟರ್‌ಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ಅಯ್ಯಪ್ಪ ಅವರ ಪತ್ನಿಗೆ ಹೆರಿಗೆಯಾಗಿ 20 ದಿನಗಳಷ್ಟೇ ಕಳೆದಿದ್ದು, ವಿಧಿಯ ಲೀಲೆಗೆ ಕುಟುಂಬ ತತ್ತರಿಸಿದೆ.

ಪ್ರಕರಣದ ಹಿನ್ನಲೆ : ಅಯ್ಯಪ್ಪ ಅವರು ಉಡುಪಿಯಲ್ಲಿ ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು, ಗುರುವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಾಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಅಯ್ಯಪ್ಪ ಅವರು ಎರಡು ವರ್ಷಗಳ ಹಿಂದೆ ಗಂಗಾವತಿಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರ ಮದುವೆಗೆ ಎರಡೂ ಕಡೆಯಿಂದಲೂ ತೀವ್ರ ವಿರೋಧವಿತ್ತು ಎನ್ನಲಾಗಿದೆ. ಹೀಗಾಗಿ ಅಯ್ಯಪ್ಪ ಅವರು ನಿಧನರಾದ ಸುದ್ದಿಯನ್ನು ಅವರ ಮನೆಯವರಿಗೆ ತಿಳಿಸಿದಾಗ ಮೃತ ದೇಹವನ್ನು ಸ್ವೀಕರಿಸಲು ಒಪ್ಪಿದ್ದಾರೆ. ಆದರೆ ಅಯ್ಯಪ್ಪ ಅವರ ಹೆಂಡತಿ ಮತ್ತು ಮಗುವನ್ನು ಸ್ವೀಕರಿಸಿಲು ನಿರಾಕರಿಸಿದ್ದಾರೆ.

ಹೀಗಾಗಿ ಅನಿವಾರ್ಯವಾಗಿ ಅಯ್ಯಪ್ಪ ಅವರ ಹೆಂಡತಿ ಮತ್ತು ಮಗುವನ್ನು ಸಖಿ ಸೆಂಟರ್‌ಗೆ ದಾಖಲಿಸಿ, ಮೃತ ದೇಹವನ್ನು ಆಂಬುಲೆನ್ಸ್ ಮೂಲಕ ಬಾದಾಮಿಗೆ ರವಾನಿಸಲಾಗಿದೆ.

Edited By : Nagaraj Tulugeri
PublicNext

PublicNext

26/08/2022 02:04 pm

Cinque Terre

21.82 K

Cinque Terre

2

ಸಂಬಂಧಿತ ಸುದ್ದಿ